ಮಂಗಳೂರು : ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ಇದು ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪರಿಣಾಮ ಬೀರುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದರಂತೆ ಮಳೆಗಾಗಿ ನೀಡಿದ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜೆಗಳಂದು ಸರಿದೂಗಿಸಬೇಕು ಎಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.