ಭವಿಷ್ಯದ ಬದುಕಿಗೆ ಅಕ್ಷರ ಕಲಿಸಿ ನಿವೃತ್ತಿ ಹೊಂದಿದ ನಮ್ಮೂರಿನ ಲೆಕ್ಕ ಮಾಸ್ಟರ್..
ಕಾಪು: ಕಾಪು ಕಳತ್ತೂರಿನ ಪಿ.ಕೆ ಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರು ಶ್ರೀ ಗೋಪಾಲಕೃಷ್ಣ ಭಟ್ ಕೆ.ಎಂ..
ಕಳೆದ ೨೭ ವರ್ಷಗಳ ಕಾಲ ಸಹಶಿಕ್ಷಕರಾಗಿ,ಏಳು ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ 31/05/2020 ರಂದು ವಯೋನಿವೃತ್ತಿ ಹೊಂದಿರುವ ಶ್ರೀ ಗೋಪಾಲಕೃಷ್ಣ ಭಟ್ ಕೆ ಎಂ ಇವರು ಹಲವು ವರ್ಷದಿಂದ SSLC ಪರೀಕ್ಷೆಯಲ್ಲಿ ಗಣಿತ ಶಾಸ್ತ್ರದಲ್ಲಿ ಶೇಕಡಾ ನೂರು ಫಲಿತಾಂಶ ಹಾಗೂ ಕಳೆದ ಎರಡು ವರ್ಷಗಳಿಂದ ಗಣಿತ ಶಾಸ್ತ್ರದಲ್ಲಿ ಉಡುಪಿ ಜಿಲ್ಲಾ ಸಾಧಕ ಪ್ರಶಸ್ತಿ ಪಡೆದು ಸಾಧನೆ ಮಾಡಿರುವರು ಹಾಗೂ ಸಂಸ್ಥೆಯ NCC ಘಟಕದ ಅಫೀಸರ್ ಆಗಿಯೂ ಸೇವೆ ಸಲ್ಲಿಸಿರುತ್ತಾರೆ..
ವಿದ್ಯಾರ್ಥಿಗಳಲ್ಲಿ ಉಜ್ವಲ ಭವಿಷ್ಯ ತುಂಬಿ ಇದೀಗ ವಯೋನಿವೃತ್ತಿ ಹೊಂದಿದ ತಮ್ಮ ನಿವೃತ್ತಿ ಜೀವನ ಸುಖಮಯವಾಗಿರಲಿ..
✍