ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯ
ಹೆಜಮಾಡಿ ಕೋಡಿ 7ನೇ ವಾರ್ಡಿನಲ್ಲಿ ಪಾರ್ವತಿ ಪುತ್ರನ್ ಅವರ ಮನೆಗೆ ಜುಲೈ 10ರಂದು ತೆಂಗಿನ ಮರ ಬಿದ್ದು ಸುಮಾರು ರೂ.50,000 ಅಂದಾಜು ನಷ್ಟವಾಗಿರುತ್ತದೆ.
ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಉಪಾಧ್ಯಕ್ಷೆ
ಪವಿತ್ರಾ ಗಿರೀಶ್, ಗ್ರಾಮ ಕರಣಿಕರಾದ ಶ್ರೀಕಾಂತ್, ಮಾಜಿ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ಸದಸ್ಯರಾದ ಸುಜಾತಾ, ನಳಿನಾಕ್ಷಿ, ಶರಣ್ ಕುಮಾರ್ ಮಟ್ಟು, ಮತ್ತಿತರರು ಭೇಟಿ ನೀಡಿದರು.