ನಂದಿಕೂರು : ರಸ್ತೆ ಹೊಂಡ - ಬಾಳೆಗಿಡ ನೆಟ್ಟು ಪ್ರತಿಭಟನೆ
Posted On:
11-07-2022 02:41PM
ಪಡುಬಿದ್ರಿ : ಇಲ್ಲಿನ ರಾಜ್ಯ ಹೆದ್ದಾರಿಯಾದ ಕಾರ್ಕಳ ರಸ್ತೆಯ ನಂದಿಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಹೊಂಡಮಯವಾಗಿದ್ದು ಸಂಚಾರಕ್ಕೆ ತೊಂದರೆಯಾಗಿ ಸಂಬಂಧಪಟ್ಟ ಇಲಾಖೆಗಳ ಮೌನದಿಂದ ಬೇಸತ್ತ ಸ್ಥಳೀಯರು ಬಾಳೆಗಿಡನೆಟ್ಟು ಜುಲೈ 10 ರಂದು ಪ್ರತಿಭಟಿಸಿದ್ದಾರೆ.
ಇಲ್ಲಿಯ ಹೊಂಡದಿಂದ ತೊಂದರೆಯಾಗಿದ್ದು
ಮಳೆಗಾಲ ಆರಂಭದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹೊಂಡ ಮುಚ್ಚುವ ಕಾರ್ಯ ನಡೆಸಲಾಗಿದ್ದು, ಇದೀಗ ಮತ್ತೆ ಬೃಹತ್ ಗಾತ್ರದ ಹೊಂಡ ಬಿದ್ದು ಸಂಚಾರಕ್ಕೆ ತೊಡಕಾಗಿದೆ.
ಮಳೆಯಿಂದ ಸೇತುವೆಯಲ್ಲಿ ನೀರು ಕೂಡಾ ಸಮರ್ಪಕವಾಗಿ ಹರಿಯದೆ ಹೊಂಡ ದಲ್ಲಿ ನಿಂತು ಜನ ಹಾಗೂ ವಾಹನ ಸಂಚಾರಿಗಳಿಗೆ ಅಪಾಯ ತಂದೊಡ್ಡು ತ್ತಿದೆ. ಇದರಿಂದ ಆಕ್ರೋಶಿತರಾದ ಗ್ರಾಮಸ್ಥರು ಬಾಳೆಗಿಡ ನೆಟ್ಟು ಅಸಮಾಧಾನ ಹೊರಹಾಕಿದ್ದಾರೆ.