ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯುವವಾಹಿನಿ‌ ಕಾಪು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ

Posted On: 12-07-2022 07:10PM

ಕಾಪು : ಪರಿಸರದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಯುವವಾಹಿನಿ‌ ಕಾಪು ಘಟಕದ ವತಿಯಿಂದ ಕಾಪು ಬಿಲ್ಲವರ ಸಹಾಯಕ ಸಂಘದ ಸಭಾಭವನದಲ್ಲಿ ಸನ್ಮಾನಿಸಲಾಯಿತು. ಕಾಪು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಕಡ 90% ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ.

ಕಾಪು ಯುವವಾಹಿನಿ ಘಟಕದ ಅಧ್ಯಕ್ಷ ಸಚಿನ್ ಉಚ್ಚಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳು ಅಭಿನಂದನಾ ಭಾಷಣ ಮಾಡಿದರು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಾದ ಸ್ನೇಹ ಜೆ. ಎರ್ಮಾಳ್, ಆಶಿಕಾ ಕಾಪು, ನಿಷ್ಮಾ ಆರ್. ಕಾಪು ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಅಕ್ಷತಾ ಕಾಪು, ಅನುಷ್ಕಾ ಕಾಪು, ಚೇತನ್ ಕಾಪು, ಭಾವಿಕ್ ಕಾಪು, ಸಮೀಕ್ಷಾ ಎರ್ಮಾಳ್ ಅವರನ್ನು ಸಮ್ಮಾನಿಸಲಾಯಿತು.

ಕಾಪು ಬಿಲ್ಲವರ ಸಹಾಯಕ‌ ಸಂಘದ ಉಪಾಧ್ಯಕ್ಷರುಗಳಾದ ಮಧು ಪಾಲನ್, ಸಕೇಂದ್ರ ಸುವರ್ಣ, ಐತಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಸಾಲಿಯಾನ್‌, ಯುವವಾಹಿನಿ ಕಾಪು ಘಟಕದ ಉಪಾಧ್ಯಕ್ಷರಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಕೋಶಾಧಿಕಾರಿ ಸೂರ್ಯ ನಾರಾಯಣ್ ಮೊದಲಾದವರು ಉಪಸ್ಥಿತರಿದ್ದರು.

ಯುವವಾಹಿನಿ ಕಾಪು ಘಟಕದ ನಿಕಟ ಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.