ಕಾಪು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಹೃದಯಾಘಾತ
Posted On:
12-07-2022 11:14PM
ಕಾಪು : ಮಂಗಳೂರಿನಿಂದ ಗುಲ್ಬರ್ಗಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡು
ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಪು ಸಮೀಪದ ಉದ್ಯಾವರದಲ್ಲಿ ಜುಲೈ 11 ರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯು ಕನಕಪ್ಪ ದಂಡಿನ (38) ತನ್ನ ಹೆಂಡತಿ
ದುರ್ಗವ್ವಳೊಂದಿಗೆ ಕಳೆದ 2 ತಿಂಗಳಿನಿಂದ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ಬಂದು ಮಂಗಳೂರಿನ ಪಂಪ್ ವೆಲ್ ಬಳಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಮಳೆಯಾದ ಕಾರಣ ಸ್ವಂತ ಊರಿನಲ್ಲಿ ಕೃಷಿ ಕೆಲಸ ಆರಂಭವಾದ ಕಾರಣ ಮಂಗಳೂರಿನಿಂದ ಬಸ್ಸಿನಲ್ಲಿ ಊರಿಗೆ ಹೊರಟು ಕಾಪುವಿನ ಉದ್ಯಾವರ ಸಮೀಪ ರಾತ್ರಿ ಕನಕಪ್ಪ ದಂಡಿನಗೆ ಎದೆನೋವು ಕಾಣಿಸಿಕೊಂಡಿದ್ದು ದುರ್ಗವ್ವ ಬಸ್ಸಿನ ಕಂಡೆಕ್ಟರ್ ಗೆ ತಿಳಿಸಿ ಅವರು ಚಾಲಕರಿಗೆ ತಿಳಿಸಿ ನಂತರ ಜಿಲ್ಲಾ ಸರಕಾರಿ ಆಸ್ಪತ್ರೆ ಅಜ್ಜರಕಾಡು ಉಡುಪಿಯ ವೈದ್ಯಾಧಿಕಾರಿಯವರಿಗೆ ತೋರಿಸಿ ಪರೀಕ್ಷಿಸಿದಾಗ ವೈದ್ಯರು ಕನಕಪ್ಪ ದಂಡಿನ ಎಂಬುವರು ಎದೆನೋವು ಕಾಣಿಸಿಕೊಂಡು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.