ಉಡುಪಿ : ಮಧುಕರ ಸುವರ್ಣ (43)ರವರು ತನ್ನ ತಾಯಿಯೊಂದಿಗೆ ಕುತ್ಪಾಡಿ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂದಿರದ ಬಳಿ ವಾಸ್ತವ್ಯವಿದ್ದು, ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದು, ಜುಲೈ 15ರ ಸಂಜೆ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಮಧುಕರ ಸುವರ್ಣರು ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.