ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಕರ್ನಾಟಕ ಯುವ ಕಾಂಗ್ರೆಸ್ ವತಿಯಿಂದ ಉದ್ಯೋಗ ಸೃಷ್ಟಿ ಆ್ಯಪ್ ಬಗ್ಗೆ ಮಾಹಿತಿ

Posted On: 17-07-2022 11:34PM

ಉಡುಪಿ :ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೋಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎನ್ನುವ ಆ್ಯಪ್ ಬಿಡುಗಡೆ ಮಾಡಿದ್ದೇವೆ.

ಈ ಒಂದು ಆ್ಯಪ್ ನಲ್ಲಿ ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್‌ಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿರುದ್ಯೋಗಿಗಳ ಸರ್ವೇಯನ್ನು ಮಾಡುತ್ತಿದ್ದೇವೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಎಷ್ಟು ನಿರುದ್ಯೋಗಿಗಳಿದ್ದಾರೆ ಎನ್ನುವ ಸಂಖ್ಯೆಯನ್ನು ಹುಡುಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ಬಗ್ಗೆ ವಿವರ ನೀಡಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಯಾವ ರೀತಿ ಉದ್ಯೋಗ ಸೃಷ್ಟಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಬೇಕು ಎಂದು ನಮ್ಮ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವಿ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ,ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್, ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.