ಕಾಪು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು.
ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್‌ಟಿ ಹಾಕಿ ಜನರನ್ನು ಬದುಕದಂತೆ ಮಾಡಿದ್ದಾರೆ. ಇದೇ ರೀತಿ ಬಡವರನ್ನು ತುಳಿಯುವ ಪ್ರಯತ್ನ ಮುಂದುವರಿದರೆ, ಮುಂದಿನ ದಿನಗಳಲ್ಲಿ ಶ್ರೀಲಂಕಾ ದೇಶದ ಪರಿಸ್ಥಿತಿ ಭಾರತದಲ್ಲಿ ಬರುವುದು ಖಚಿತ ಎಂದರು.
ಈ ಸಂದರ್ಭ ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಹ್ಮದ್, ಕಾಪು ಪುರಸಭಾ ಸದಸ್ಯ ನೂರುದ್ದೀನ್ ಅಹಮದ್ ಮಹಲ್ಲಾ, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.