ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯುವವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ - ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು

Posted On: 23-07-2022 10:31PM

ಉಡುಪಿ : ಯುವ ವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜುಲೈ 23 ರಂದು ಉದ್ಯಾವರ ಬಲಾಯಿಪಾದೆಯ ಯುವವಾಹಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಸಾಹಿತಿಗಳು ಹಾಗೂ ಉಪನ್ಯಾಸಕರಾದ ವಾಸಂತಿ ಅಂಬಲಪಾಡಿ ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಪರ್ಧಾ ಕೂಟದ ಯಶಸ್ಸಿಗೆ ಶುಭ ಹಾರೈಸಿದರು.

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಹೈಸ್ಕೂಲು ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಒಟ್ಟು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲಾ ಪ್ರತಿಭೆಗಳಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಉಡುಪಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಜಗದೀಶ್ ಕುಮಾರ್, ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ ಯುವವಾಹಿನಿ ಘಟಕದ ಪ್ರವೀಣ್ ಡಿ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕ ವೀಕ್ಷಿತ್ ಪ್ರಸ್ತಾವಿಸಿದರು. ಸುಪ್ರೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ದಯಾನಂದ್ ಕರ್ಕೇರ ವಂದಿಸಿದರು. ಶ್ರೇಯಸ್ ಕೋಟ್ಯಾನ್ ತೀರ್ಪುಗಾರರಾಗಿ ಹಾಗೂ ಅಮಿತಾಂಜಲಿ ಕಿರಣ್ ಕಾರ್ಯಕ್ರಮ ಸಂಚಾಲಕರಾಗಿ ಸಹಕರಿಸಿದರು.