ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು : ದೇವಾಡಿಗರ ಸಂಘದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Posted On: 25-07-2022 12:05AM

ಕಾಪು : ದೇವಾಡಿಗರ ಸಂಘ 92 ಹೇರೂರು ಬಂಟಕಲ್ಲು ಇವರ ಆಶ್ರಯದಲ್ಲಿ ಇಂದು ಆಟಿಡೊಂಜಿ ದಿನ ಕಾರ್ಯಕ್ರಮ ಹೇರೂರು ಶಶಿಕಲಾ ದಿನೇಶ್ ದೇವಾಡಿಗರವರ ಮನೆಯಲ್ಲಿ ನಡೆಯಿತು.

ಸಂಘದ ಸದಸ್ಯರಿಗೆ ವಿವಿಧ ಜಾನಪದ ಸ್ಪರ್ಧೆಗಳನ್ನು ನಡೆಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಸದಸ್ಯರು ಸಮಾಜ ಸೇವಕರು ಆಗಿರುವ ವಿಜಯ ಕೊಡವೂರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿ ತಿಂಗಳ ಮಹತ್ವ, ಆರೋಗ್ಯವಂತ ಆಹಾರದ ಬಗ್ಗೆ ಹಾಗೂ ಕಲ್ಮಾಡಿ ಶ್ರೀ ಬಗ್ಗುಪಂಜರ್ಲಿ ದೈವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹೇರೂರು ಗ್ರಾಮದ ದೇವಾಡಿಗ ಸಮಾಜದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉಡುಪಿ ದೇವಾಡಿಗರ ಸಂಘದ ಮಾಜಿ ಅಧ್ಯಕ್ಷರಾದ ಗಣೇಶ್ ದೇವಾಡಿಗ ರವರು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ವಿಶ್ವ ದೇವಾಡಿಗ ಮಹಾಮಂಡಲದ ಸದಸ್ಯರು, ಉಡುಪಿ ದೇವಾಡಿಗರ ಸಂಘದ ಸದಸ್ಯರು, ಹೇರೂರು ದೇವಾಡಿಗರ ಸಂಘದ ಗೌರವ ಅಧ್ಯಕ್ಷರಾದ ದೇಜು ಸೇರಿಗಾರ್, ಸಂಘದ ಅಧ್ಯಕ್ಷರಾದ ಶಂಕರ ದೇವಾಡಿಗ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಅನಿತಾ ದೇವಾಡಿಗ ಮತ್ತು ಚರಣ್ ದೇವಾಡಿಗರವರು ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರರಾದವರ ಪಟ್ಟಿಯನ್ನು ವಾಚಿಸಿದರು. ಕುಮಾರಿ ಅಭಿಜ್ಞಾರವರ ಪ್ರಾರ್ಥಿಸಿದರು. ಕಾರ್ಯದರ್ಶಿ ಉದಯ ದೇವಾಡಿಗರವರು ಸ್ವಾಗತಿಸಿದರು. ದಿನೇಶ್ ದೇವಾಡಿಗ ಮತ್ತು ಅಖಿಲ ದೇವಾಡಿಗರವರು ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಗೋಪಾಲ ದೇವಾಡಿಗ ರವರು ವಂದಿಸಿದರು.

ಕಾರ್ಯಕ್ರಮದ ಬಳಿಕ‌ ಸಂಘದ ಸದಸ್ಯರು ತಯಾರಿಸಿದ ಸುಮಾರು‌ 30 ಬಗೆಯ ಆಟಿ ತಿಂಗಳ ವಿವಿಧ ತಿಂಡಿ ತಿನಸುಗಳನ್ನು ಆಗಮಿಸಿದ ಎಲ್ಲರಿಗೂ‌ ಉಣ ಬಡಿಸಲಾಯಿತು.