ಪಕ್ಷದ ಕಾರ್ಯಕರ್ತರಿಗೆ ರಕ್ಷಣೆಕೊಡದ ಬಿಜೆಪಿ ಯಾವ ಪುರುಷಾರ್ಥಕ್ಕೆ ಜನೋತ್ಸವ ಮಾಡುತ್ತೆ ? - ಕೃಷ್ಣಮೂರ್ತಿ ಆಚಾರ್ಯ
Posted On:
28-07-2022 05:18PM
ಉಡುಪಿ: ಬೆಳ್ಳಾರೆಯ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣ ಖಂಡನೀಯ. ಕರ್ನಾಟಕದ ಜನತೆಗೆ ಹಾಗೂ ಸ್ವತಃ ತಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆನೇ ರಕ್ಷಣೆ ಕೊಡುವ ಸಾಮರ್ಥ್ಯ ಇಲ್ಲದ ಬಿಜೆಪಿ ಸರ್ಕಾರ ಯಾವ ಮುಖ ಇಟ್ಕೊಂಡು ಜನೋತ್ಸವ ಮಾಡುತ್ತೆ..?
ಈ ಬಿಜೆಪಿ ಸರ್ಕಾರ ಬಂದ ನಂತರ ದಿನದಿಂದ ದಿನ ಹಿಂದೂ ಮುಸ್ಲಿಂ ಸಹೋದರರುಗಳ ಹತ್ಯೆ ಮತ್ತಷ್ಟು ನಿರಂತರವಾಗಿ ಜಾಸ್ತಿ ಆಗ್ತಾನೆ ಇದೆ. ಹತ್ಯೆಯಾದ ಕುಟುಂಬಗಳಿಗೆ ಇನ್ನೂ ಸರಿಯಾಗಿ ನ್ಯಾಯ ಸಿಕ್ಕಿಲ್ಲ ಹೀಗಿರುವಾಗ ಬಿಜೆಪಿ ಯಾವ ಮುಖದಲ್ಲಿ ಜನೋತ್ಸವ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿಯ ಆಚಾರ್ಯ ಪ್ರಶ್ನಿಸಿದ್ದಾರೆ.
ಒಂದು ಕಡೆ ಬಿಜೆಪಿ ಸರ್ಕಾರ ಕಾಂಟ್ರ್ಯಾಕ್ಟರುಗಳಿಂದ 40% ಕಮಿಷನ್ ಭ್ರಷ್ಟಾಚಾರ ಮಾಡುತ್ತಿದೆ. ಮತ್ತೊಂದು ಕಡೆ ಜನರಿಗೆ ನಿರಂತರವಾಗಿ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಇಷ್ಟೆಲ್ಲ ಜನರಿಗೆ ತೊಂದರೆ ಕೊಟ್ಟು ಯಾವ ಮುಖ ಇಟ್ಟುಕೊಂಡು ಜನೋತ್ಸವ ಮಾಡುತ್ತಾರೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಬಿಜೆಪಿ ಸರಕಾರ ವಿಫಲವಾಗಿದೆ, ಸರ್ಕಾರ ಬರಿ ಕಠಿಣ ಕ್ರಮ ಕಠಿಣ ಕ್ರಮ ಎನ್ನುತ್ತಾ ಬರಿ ಮಾತಿಗೆ ಮಾತ್ರ ಸೀಮಿತವಾಗಿದೆ ಹೊರತು ದುಷ್ಕರ್ಮಿಗಳ ದಾಳಿ ಮಾತ್ರ ಕಡಿಮೆ ಆಗಿಲ್ಲ. ಮುಂದುವರಿತಾನೆ ಇದೆ ಅಮಾಯಕರು ಮತ್ತಷ್ಟು ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಯಾವ ಮುಖ ಇಟ್ಕೊಂಡು ಜನೋತ್ಸವ ಮಾಡಲು ಹೊರಟಿದೆ. ಮೊದಲು ಅಮಾಯಕರ ಜನರ ರಕ್ಷಣೆಗೆ ಮುಂದಾಗಲಿ ದಿನಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆ ಕಡಿಮೆ ಮಾಡಲಿ ಜಿ ಎಸ್ ಟಿ ತೆರಿಗೆ ತಕ್ಷಣ ನಿಲ್ಲಿಸಿ.
ಅದೇ ರೀತಿ ಪ್ರವೀಣ್ ನೆಟ್ಟಾರೆ ಕೊಲೆ ಖಂಡನೀಯ
ಪ್ರಕರಣದ ಆರೋಪಿಗಳನ್ನು ಯಾವುದೇ ಜಾತಿ ಧರ್ಮ ಲೆಕ್ಕಿಸದೆ ತಕ್ಷಣ ಬಂಧಿಸಿ,ಕಾನೂನಿನ ಪ್ರಕಾರ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕಾಗಿದೆ ಅದೇ ರೀತಿ ಇತ್ತೀಚೆಗೆ ಬೆಳ್ಳಾರೆ ಪರಿಸರದಲ್ಲಿ ಮಸೂದ್ ಕೊಲೆ ಸಂಭವಿಸಿದೆ ಇದು ಅತ್ಯಂತ ಖಂಡನೀಯ. ಚುನಾವಣೆ ಸಂದರ್ಭ ಹಿಂದು ಮುಸ್ಲಿಮರ ಹತ್ಯೆಯನ್ನು ಮುಂದೆ ಇಟ್ಟು ಕೊಂಡು ರಾಜಕೀಯ ಬೇಳೆ ಬೇಯಿಸುವುದು ಬಿಜೆಪಿಗೆ ಚಾಲಿಯಾಗಿ ಹೋಗಿದೆ. ಪ್ರಕರಣದ ಆರೋಪಿಗಳು ಯಾರೇ ಆದರೂ ಪಕ್ಷಾತೀತವಾಗಿ ಯಾವುದೇ ಜಾತಿ ಧರ್ಮ ನೋಡದೆ ಸೂಕ್ತ ತನಿಖೆ ನಡೆಸಿ ಅವರಿಗೆ ಶಿಕ್ಷೆ ಆಗಬೇಕು ಇಂತಹ ಘಟನೆಗಳು ಪದೇ ಪದೇ ಮುಂದೆ ಯಾವತ್ತೂ ಆಗದಂತೆ ಕ್ರಮ ವಹಿಸಬೇಕೆಂದು ಮಾಧ್ಯಮದ ಮೂಲಕ ಸರಕಾರವನ್ನು ಆಗ್ರಹಿಸುತ್ತೇನೆ ಎಂದು ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಉಡುಪಿ ವಿಧಾನ ಸಭಾ ಕ್ಷೇತ್ರ ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ.