ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರವೀಣ್ ನೆಟ್ಟಾರು ಹತ್ಯೆ - ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳ ಖಂಡನೆ

Posted On: 28-07-2022 05:32PM

ಕಾಪು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಭಾಗದಲ್ಲಿ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆಯಾಗಿದೆ. ನಾನು ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ ಹಲವಾರು ವರ್ಷಗಳಿಂದ ತಮ್ಮ ನಾಯಕರ ಮಾತುಗಳನ್ನು ಕೇಳಿ ಉದ್ರೇಕಗೊಂಡು ಕೆಲವು ಯುವಕರು ತಮ್ಮ ಜೀವನವನ್ನು ಕಳೆದುಕೊಂಡಿದ್ದಾರೆ. ಇದರಲ್ಲಿ ಗಮನಿಸಬೇಕಾದ ಅಂಶವೇನೆಂದರೆ ಯಾವುದೇ ರಾಜಕಾರಣಿಗಳ ಮಕ್ಕಳು ಅಥವಾ ಶ್ರೀಮಂತರ ಮಕ್ಕಳು ಸಾಯುತ್ತಿಲ್ಲ ಬದಲಾಗಿ ಹಿಂದುಳಿದ ವರ್ಗದ ಯುವಕರು, ಬಡವರ ಮನೆಯ ಮಕ್ಕಳು ಈ ಕೋಮುಗಲಭೆಯ ಕಾರಣದಿಂದಾಗಿ ಸಾಯುತ್ತಿದ್ದಾರೆ ಎಂದು ಉಡುಪಿ ಜಿಲ್ಲೆಯ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

ಬಿಜೆಪಿ ನಾಯಕರಿಗೆ ತಮ್ಮ ಕಾರ್ಯಕರ್ತರನ್ನೇ ರಕ್ಷಣೆ ಮಾಡಲಿಕ್ಕೆ ಆಗ್ತಾ ಇಲ್ಲ. ಇನ್ನು ನಮ್ಮ ರಾಜ್ಯದ ಜನ ಸಾಮಾನ್ಯರ ರಕ್ಷಣೆ ಇವರು ಹೇಗೆ ಮಾಡಲು ಸಾಧ್ಯ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತುಹೋಗಿದೆ, ಬಿಜೆಪಿಯವರಿಗೆ ಅಧಿಕಾರ ಅನುಭವಿಸಲಿಕ್ಕೆ ಮಾತ್ರ ಗೊತ್ತಿದೆ, ಚಲಾಯಿಸಲು ಗೊತ್ತಿಲ್ಲ. ನಾನು ಎಲ್ಲಾ ಸಮುದಾಯದ ಯುವಕರಿಗೆ ಮನವಿಯನ್ನು ಮಾಡುತ್ತೇನೆ ನಿಮ್ಮ ನಿಮ್ಮ ನಾಯಕರ ಉದ್ರೇಕದ ಮಾತನ್ನು ಕೇಳಿ ನೀವು ಉದ್ರೇಕಗೊಂಡು ನಿಮ್ಮ ಜೀವವನ್ನು ಕಳೆದುಕೊಳ್ಳಬೇಡಿ, ಇನ್ನಷ್ಟು ವರ್ಷ ಬದುಕಿ ಬಾಳಬೇಕಾದ ಜೀವ ನಿಮ್ಮದು, ನಿಮ್ಮ ಜೀವನವನ್ನು ಕಟ್ಟಿಕೊಳ್ಳಿ ಎಂದು ಮನವಿಯನ್ನು ಮಾಡುತ್ತೇನೆ.

ಕೊಲೆಯನ್ನು ಮಾಡಿದಂತಹ ಪಾತಕಿಗಳಿಗೆ ಉಗ್ರವಾಗಿ ಶಿಕ್ಷೆಯನ್ನು ನೀಡಬೇಕು, ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.