ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಲಿಮಾರು : ಹೊಯಿಗೆ ಫ್ರೆಂಡ್ಸ್ ವತಿಯಿಂದ ಆಟಿ ಅಮವಾಸ್ಯೆಯ ಪ್ರಯುಕ್ತ ಕಷಾಯ ವಿತರಣೆ

Posted On: 28-07-2022 06:10PM

ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು , ಸಂಸ್ಥೆಯ ವತಿಯಿಂದ ಆಟಿ ಅಮವಾಸ್ಯೆಯ ಪ್ರಯುಕ್ತ ಔಷಧೀಯ ಕಷಾಯ ವಿತರಿಸಲಾಯಿತು.

ಪಲಿಮಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕರಾದ ಶ್ರೀ ಶ್ರೀನಿವಾಸ ಉಡುಪ, ಶರತ್ ಉಡುಪ, ಸಂಸ್ಥೆಯ ಅಧ್ಯಕ್ಷರಾದ ರಾಘವೇಂದ್ರ ಜೆ ಸುವರ್ಣ , ಉಪಾಧ್ಯಕ್ಷರಾದ ರಿತೇಶ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ಶ್ರೀನಿತ್ ಸಂತೋಷ್ ದೇವಾಡಿಗ , ಲಕ್ಷ್ಮಣ ಪೂಜಾರಿ, ಶ್ರೀಜಿತ್, ಪ್ರಜ್ಞೇಶ್ ಉಪಸ್ಥಿತರಿದ್ದರು.