ಕಾಪು ಪೇಟೆಯಲ್ಲಿ ಬಸ್ಸಿನಡಿಗೆ ಬಿದ್ದ ವ್ಯಕ್ತಿ : ಕಾಲು ಮುರಿತ ; ಆಸ್ಪತ್ರೆಗೆ ದಾಖಲು
Posted On:
28-07-2022 09:53PM
ಕಾಪು : ಬಸ್ ನಿಲ್ದಾಣದಲ್ಲಿದ್ದ ವ್ಯಕ್ತಿ ನೇರವಾಗಿ ಬಸ್‌ನತ್ತ ಬಂದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಹಿಂಬದಿಯ ಚಕ್ರದಡಿಗೆ ಸಿಲುಕಿದ ಘಟನೆ ಜುಲೈ 28ರ ಸಂಜೆ ಕಾಪು ಪೇಟೆಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಶಿರ್ವ ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು ಕೂಲಿ ಕಾರ್ಮಿಕರಾಗಿದ್ದರು.
ಚಕ್ರದಡಿಗೆ ಸಿಲುಕಿದ ಗಾಯಾಳುವಿನ ಕಾಲು ಸಂಪೂರ್ಣ ಮುರಿತಕ್ಕೊಳಗಾಗಿದ್ದು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.