ಹೆಜಮಾಡಿ ಟೋಲ್ ಬಳಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪೊಲೀಸರ ವಶ
Posted On:
29-07-2022 02:10PM
ಹೆಜಮಾಡಿ : ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ನಿರ್ಬಂಧವಿದ್ದರೂ ಹೋಗಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್‌ನಲ್ಲಿ ನಿನ್ನೆ ರಾತ್ರಿ ಪಾಝಿಲ್ ಕೊಲೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇರುವುದರಿಂದ ಪೊಲೀಸರು ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧಿಸಿದರು.
ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬಸ್ಥರನ್ನು ಭೇಟಿ ಮಾಡುವ ಯೋಜನೆ ಮುತಾಲಿಕ್ ಅವರಿಗಿತ್ತು. ಅವರ ಭೇಟಿಯಿಂದ ಇಲ್ಲಿನ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದೆಂಬ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮತ್ತು ಕಮಿಷನರೇಟ್, ಮುತಾಲಿಕ್ ರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು.