92 ಹೇರೂರು ಗ್ರಾಮದಲ್ಲಿ ಗಿಡಬೆಳೆಸಿ ಬಹುಮಾನ ಗೆಲ್ಲಿ ಕಾರ್ಯಕ್ರಮ
Posted On:
02-08-2022 10:10PM
ಕಾಪು : ಲಯನ್ಸ್ ಕ್ಲಬ್ ಬಂಟಕಲ್ಲು ಬಿ.ಸಿ.ರೋಡ್ ಇವರ ನೇತೃತ್ವದಲ್ಲಿ ಕಾಪು ತಾಲೂಕಿನ ಮಜೂರು ಪಂಚಾಯತ್ ವ್ಯಾಪ್ತಿಯ 92 ಹೇರೂರು ಗ್ರಾಮದಲ್ಲಿ ಗಿಡ ಬೆಳೆಸಿ ಮೂರು ವರ್ಷಗಳ ನಂತರ ಬಹುಮಾನ ಗೆಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಧೀರಜ್ ಮತ್ತು ಮುಂಬಯಿ ಉದ್ಯಮಿ ಉದಯ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ನೆರವೇರಿದ ಈ ಕಾರ್ಯಕ್ರಮ ಗ್ರಾಮದ ಜನರ ಪ್ರಶಂಸೆಗೆ ಪಾತ್ರವಾಯಿತು. ಗ್ರಾಮದ ಮನೆಗಳಿಗೆ ಲಕ್ಷ್ಮಣ ಫಲವನ್ನು ವಿತರಿಸಲಾಯಿತು.
ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಎಡ್ವರ್ಡ್ ಮೆನೇಜಸ್, ಪ್ರಸ್ತುತ ಅಧ್ಯಕ್ಷರಾದ ವಿಲ್ಫಡ್೯ ಪಿಂಟೊ ಜನರಿಗೆ ಗಿಡದ ಮಹತ್ವ, ಅದರ ಪೋಷಣೆಯ ಬಗ್ಗೆ ಮಾಹಿತಿ ನೀಡಿದರು. ಸದಸ್ಯರಾದ ವಿಜಯ್ ಧೀರಜ್ ಮಾತನಾಡಿ ಮೂರು ವರ್ಷಗಳ ಕಾಲ ಮಕ್ಕಳಂತೆ ಗಿಡವನ್ನು ಬೆಳೆಸಿ ತದನಂತ ಆ ಗಿಡವೇ ನಿಮಗೆ ಆಸರೆಯಾಗುತ್ತದೆ. ಮೂರು ವರ್ಷಗಳ ನಂತರ ಚೆನ್ನಾಗಿ ಪಾಲನೆ ಪೋಷಣೆ ಮಾಡಿದ ಗ್ರಾಮದ 10 ಜನರನ್ನು ಗೌರವಿಸಲಾಗುವುದು ಎಂದು ಹೇಳಿದರು.
ಲಯನ್ಸ್ ಕ್ಲಬ್ ಬಂಟಕಲ್ಲು ಕಾರ್ಯದರ್ಶಿ ಉಮೇಶ್ ಕುಲಾಲ್ ವಂದಿಸಿದರು. ಲಯನ್ಸ್ ಕ್ಲಬ್ ಬಂಟಕಲ್ಲು ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.