ದಾಂಪತ್ಯದಲ್ಲಿ ಜೊತೆಯಾಗಿ ಸಾವಿನಲ್ಲೂ ಜೊತೆಯಾದ ದಂಪತಿ
Posted On:
03-08-2022 07:43PM
ಕಾಪು : ಮಾನವ ಜೀವನದಲ್ಲಿ ಸಾವು ನಿಶ್ಚಿತ. ಆದರೆ ತಮ್ಮ ಪ್ರೀತಿ ಪಾತ್ರರ ಜೊತೆಗೆ ಸಾವು ವಿರಳ. ಅಂತಹ ಘಟನೆ ಬೆಳಪುವಿನಲ್ಲಿ ನಡೆದಿದೆ.
ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಜೊತೆಯಾದ ದಂಪತಿ.
ಸಾವಿನಲ್ಲೂ ಜೊತೆಯಾದ ದಂಪತಿಯ ಮೃತದೇಹವನ್ನು ಮಕ್ಕಳು ಮತ್ತು ಕುಟುಂಬಸ್ಥರು ಜೊತೆ ಸೇರಿ ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿ ನೇತೃತ್ವದಲ್ಲಿ ಬೆಳಪು ಧೂಮಪ್ಪ ಶೆಟ್ಟಿ ಮನೆ ಬಳಿಯ ಜಮೀನಿನಲ್ಲಿ ಸಿದ್ಧಪಡಿಸಿದ ಚಿತೆಯಲ್ಲಿ ಜೋಡಿಯಾಗಿಯೇ ಅಂತ್ಯಕ್ರಿಯೆ ನಡೆಸಲಾಯಿತು.