ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ

Posted On: 03-08-2022 09:48PM

ಶಿರ್ವ : ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಜೀಸ್ (ದಿಯಾ ಸಿಸ್ಟಮ್ ಸಂಸ್ಥೆ)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್, ಸ್ಟಾಟಿಸ್ಟಿಕ್ಸ್, ಎಲೆಕ್ಟ್ರಾನಿಕ್ಸ್), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ.ಎಸ್),ಎಂಎಸ್ಸಿ, ಎಂಸಿಎ, ಬಿಇ,ಬಿಟೆಕ್ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಆಗಸ್ಟ್ 03ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.

ಇದು ಸ್ಪರ್ಧಾತ್ಮಕ ಯುಗ ಎಂದು ತಿಳಿದಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಗೆದ್ದವರು ಒಂದು ಸ್ಪೂರ್ತಿದಾತರಾದರೆ ಸೋತವರು ಅನುಭವಗಳ ಮೂಲಕ ಸವಾಲುಗಳನ್ನು ಎದುರಿಸಿ ಗೆಲ್ಲಬೇಕು ಹಾಗೆ ಶಿಕ್ಷಣದ ಜೊತೆಗೆ ಪ್ರತಿಯೊಬ್ಬ ಅಭ್ಯರ್ಥಿಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾಗಿರುವ ಕೌಶಲಗಳನ್ನು ಕಲಿತು ಉದ್ಯೋಗವನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಗ್ಲೋಟಚ್ ಟೆಕ್ನಾಲಜೀಸ್ ಮ್ಯಾನೇಜರ್ ಎಚ್.ಆರ್ ಶ್ರೀ ಎಬಿನೇಜರ್ ರಾಜಾರವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ | ಹೆರಾಲ್ಡ್ ಐವನ್ ಮೋನಿಸ್ ರವರು ಇಂದಿನ ಕಾಲದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಳು ಲಭ್ಯವಿದ್ದು ಅದರ ಮಾಹಿತಿಯನ್ನು ಸೂಕ್ತವಾಗಿ ಪಡೆದು - ಸೂಕ್ತ ತಯಾರಿಕೆಯನ್ನು ಮಾಡಿಕೊಂಡು ಇಂತಹ ಕ್ಯಾಂಪಸ್ ಸಂದಶ೯ಗಳು ವಿದ್ಯಾರ್ಥಿಗಳಿಗೆ ಉದ್ಯೋಗ ಭರವಸೆಯನ್ನು ಕ್ಲಪ್ತ ಸಮಯದಲ್ಲಿ ಒದಗಿಸಿ ಕೊಡುವ ಮೂಲಕ ವೃತ್ತಿ ಬದುಕಿನ ಒತ್ತಡವನ್ನು ಕಡಿಮೆಗೊಳಿಸುತ್ತದೆ ಹಾಗೂ ಇದರ ಸದುಪಯೋಗವನ್ನು ಹೆಚ್ಚು ಅಭ್ಯರ್ಥಿಗಳು ಪಡೆದುಕೊಳ್ಳ ಬೇಕೆಂದು ಕಿವಿ ಮಾತು ಹೇಳಿದರು. ಈ ಕಾರ್ಯಕ್ರಮದಲ್ಲಿ ಗ್ಲೋಟಚ್ ಟೆಕ್ನಾಲಜೀಸ್ ಸಂಸ್ಥೆಯ ಸೀನಿಯರ್ ರೆಕ್ರೂಟ್ಮೆಂಟ್ ಟೀಮ್ ಏಂಜೆಲಾ ಅಲ್ವಾರೆಸ್, ಶ್ರದ್ಧ ರಾಯ್ಕರ್, ಟೆಕ್ನಿಕಲ್ ಇಂಟರ್ವ್ಯೂವರ್ ಸುರೇಶ್ ರೈ , ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಯಶೋದಾ, ಉಪನ್ಯಾಸಕಿ ದಿವ್ಯಶ್ರೀ ಬಿ, ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿಗಳಾದ ಅನುಪ್ ನಾಯಕ್, ಎಲ್ಲ ತೃತಿಯ ಬಿಸಿಎ ವಿದ್ಯಾರ್ಥಿಗಳು ಸಹಕರಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿದರು. ಪ್ಲೇಸ್‌ಮೆಂಟ್ ಸೆಲ್ಲಿನ ಸಂಯೋಜಕಿ ತನುಜ ಎನ್ ಸುವರ್ಣ ವಂದಿಸಿದರು.