ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕಾಂಗ್ರೆಸ್ ಪಕ್ಷದಿಂದ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸದ ಅಂಗವಾಗಿ ಕಾಲ್ನಡಿಗೆ ಜಾಥಾ

Posted On: 05-08-2022 09:09PM

ಕಾಪು : ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಸಂಭ್ರಮಾಚರಣೆಯನ್ನು ವೈಭವಪೂರ್ಣವಾಗಿ ಆಚರಿಸುವ ಸಲುವಾಗಿ, ಸ್ವಾತಂತ್ರ್ಯ ಸಂಗ್ರಾಮದ ವೀರ-ಯೋಧರ ತ್ಯಾಗ, ಬಲಿದಾನ ಮತ್ತು ಶಾಂತಿ, ಸಾಮರಸ್ಯ ಹಾಗೂ ದೇಶಪ್ರೇಮದ ಸಂದೇಶವನ್ನು ಸಾರುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಕಾಲ್ನಡಿಗೆ-ಜಾಥಾ ಹಮ್ಮಿಕೊಂಡಿದ್ದು ಈ‌ ನಿಟ್ಟಿನಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಕಟಪಾಡಿ ಮಟ್ಟುನಿಂದ ಪ್ರಾರಂಭಗೊಂಡು, ಕಟಪಾಡಿ -ಸುಭಾಸ್ ನಗರ/ಕುರ್ಕಾಲು - ಶಂಕರಪುರ - ಬಂಟಕಲ್ಲು - ಪಾಂಬೂರು - ಪಂಜಿಮಾರ್ ಮೂಲಕ ಸಾಗಿ, ಶಿರ್ವ ಪೇಟೆಯಲ್ಲಿ ಸಮಾಪಣೆಗೊಂಡಿತು.

ತದನಂತರ, ಶಿರ್ವ ಪೇಟೆಯಲ್ಲಿರುವ ಮಹಿಳಾ ಮಂಡಳಿಯ ಸಭಾಂಗಣದಲ್ಲಿ ಸಮಾರೋಪ ಸಭೆ ನಡೆಯಿತು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಭಯ ಚಂದ್ರ ಜೈನ್ ,ಮಯೂರ್ ಜಯಕುಮಾರ್ ,ಧ್ರುವ ನಾರಾಯಣ್, ಮಂಜುನಾಥ್ ಭಂಡಾರಿ, ನವೀನ್ ಚಂದ್ರ ಶೆಟ್ಟಿ, ಎಂ ಎ ಗಪೂರ್, ನವೀನ್ ಚಂದ್ರ ಸುವರ್ಣ, ಅಶೋಕ್ ಕುಮಾರ್ ಕೊಡವೂರು, ರಮೇಶ್ ಕಾಂಚನ್, ಹರೀಶ್ ನಾಯಕ್ ಕಾಪು ಮತ್ತಿತರರು ಉಪಸ್ಥಿತರಿದ್ದರು.