ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ಹಾಗೂ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಆಗಸ್ಟ್ 8ರಂದು ಜರಗಿತು.
ಪಾಂಗಾಳ ಮುರಳಿ ಭಟ್ ಅವರ ನೇತೃತ್ವದಲ್ಲಿ ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು.
ಈ ಸಂದರ್ಭದಲ್ಲಿ ಗ್ರಾಮದ ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮಂಡೇಡಿ ದೇರೆಕಾರ್ ಮನೆ ದಿ|ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಮಗ ದಯಾನಂದ ವಿ ಶೆಟ್ಟಿಯವರು ಪ್ರೋತ್ಸಾಹ ಧನ ನೀಡಿದರು ಹಾಗು ಕುಂಜಿರಬೆಟ್ಟು ಶಶಿಧರ ಕೆ ಶೆಟ್ಟಿ ವಿದ್ಯಾರ್ಥಿಗಳಿಗೆ ಶಾಲು, ಸ್ಮರಣಿಕೆ ನೀಡಿ, ಕುಮಾರಿ ಸೃಷ್ಟಿ ಶಶಿಧರ ಶೆಟ್ಟಿ ಇವರಿಂದ ಅನ್ನಪ್ರಸಾದ ಸೇವೆ ಜರಗಿತು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ, ಕಾರ್ಯದರ್ಶಿ ಕೃಷ್ಣ ವಿ ಶೆಟ್ಟಿ, ಕೋಶಾಧಿಕಾರಿ ಸಂತೋಷ್ ಎನ್ ಶೆಟ್ಟಿ, ಜೀವನ್ ಪ್ರಕಾಶ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಶಿವರಾಮ ಜೆ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಮೇಶ್ ಶೆಟ್ಟಿ, ಶೇಖರ ಶೆಟ್ಟಿ, ಸುಧಾಕರ್ ಶೆಟ್ಟಿ ಮತ್ತು ಮಂಡಳಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.