ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಳತ್ತೂರು ಕುಲಾಲ ಒಕ್ಕೂಟ : ಸನ್ಮಾನ

Posted On: 07-08-2022 02:36PM

ಕಾಪು : ಕುಲಾಲ ಬಾಂಧವರು ಕಳತ್ತೂರು ಒಕ್ಕೂಟ ಇದರ ವತಿಯಿಂದ ರವಿವಾರ ತಿಂಗಳ ಮಾಸಿಕ ಸಭೆಯಲ್ಲಿ ಊರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಾದ ಶರಣ್ ಕುಲಾಲ್, ರವಿತೇಜ್ ಕುಲಾಲ್, ವೀಕ್ಷಾ ಕುಲಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸುಂದರ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾಂಚನ ಕುಲಾಲ್ ಪ್ರಾರ್ಥಿಸಿ, ಸಂತೋಷ್ ಕುಲಾಲ್ ಮಲಂಗೋಲಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.