ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಾಪು ಒಕ್ಕೂಟದ ವತಿಯಿಂದ ಆದಿತ್ಯವಾರ ಬೆಳಿಗ್ಗೆ ಮಹಾದೇವಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಒಕ್ಕೂಟದ ಅಧ್ಯಕ್ಷರಾದ ರಮಾಶೆಟ್ಟಿ, ಕಾಪು ವಲಯದ ಮೇಲ್ವಿಚಾರಕರಾದ ಮಮತಾ, ಪುರಸಭಾ ಮಾಜಿ ಅಧ್ಯಕ್ಷರಾದ ಅನಿಲ್ ಕುಮಾರ್, ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮ ಆರ್ ಕೋಟ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಜ್ಯೋತಿ ಉಪಸ್ಥಿತರಿದ್ದರು.