ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ವಿಶೇಷ ಬಹುಮಾನ
Posted On:
12-08-2022 11:39PM
ಪಡುಬಿದ್ರಿ : ಇಲ್ಲಿನ ಸಹಕಾರಿ ವ್ಯವಸಾಯಿಕ ಸೊಸೈಟಿಯ 2021-22ನೇ ವಾರ್ಷಿಕ ಸಾಲಿನ ಬ್ಯಾಂಕಿಂಗ್ ವ್ಯವಹಾರದಲ್ಲಿ ಗಳಿಸಿದ ಪ್ರಗತಿಯನ್ನು ಗುರುತಿಸಿ ಆಗಸ್ಟ್ 5ರಂದು ಮಂಗಳೂರು ಕೊಡಿಯಾಲ್ ಬೈಲ್ ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2021-22 ನೇ ಸಾಲಿನ ಮಹಾಸಭೆಯಲ್ಲಿ 2021-22 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ನೀಡಿ ಗೌರವಿಸಲಾಯಿತು.
ಉಡುಪಿ ಜಿಲ್ಲೆಯಲ್ಲಿಯೇ ಹಲವಾರು ವರ್ಷಗಳಿಂದ ಸತತವಾಗಿ 25% ಡಿವಿಡೆಂಡ್ ನೀಡುತ್ತಿರುವ ಏಕೈಕ ಸಂಸ್ಥೆಯಾಗಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು 2021-22 ನೇ ಸಾಲಿನಲ್ಲಿ 100 ಕೋಟಿ ಠೇವಣಿ ಗುರಿ ಸಾಧನೆಯನ್ನು ತಲುಪಿದ್ದು ಪ್ರಪಥಮವಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ರೂಪಾಯಿ 1,00,000/ ವಿಶೇಷ ಬಹುಮಾನವನ್ನು ಕೂಡ ಪಡೆಯಿತು.
ಮಂಗಳೂರು ಕೊಡಿಯಾಲ್ ಬೈಲ್ ನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಪರವಾಗಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನಿಶ್ಚಿತಾ ಪಿ.ಎಚ್. ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಹಾಗೂ ವಿಶೇಷ ಬಹುಮಾನವನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ ಜಿ.ಎನ್., ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ ಕೆ.ಆರ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ. ಇದರ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.