ಕಾಪು. ಜೂನ್, 5 : ಉಡುಪಿ ಜೆಲ್ಲೆಯ ಕಾಪು ತಾಲೂಕಿನ ಪಾದೂರು, ಮಂಗಳೂರು ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕೇಂದ್ರ ಸರ್ಕಾರ ಹೊಂದಿರುವ ಭೂಗತ ತೈಲ ಸಂಗ್ರಹಗಳಿಂದ ದೇಶಕ್ಕೆ ಬರೋಬ್ಬರಿ 5000 ಕೋಟಿ ರೂ. ವಿದೇಶಿ ವಿನಿಮಯ ಉಳಿತಾಯವಾಗಿದೆ.
53 ಲಕ್ಷ ಟನ್ ನಷ್ಟು ತುರ್ತು ಇಂಧನ ಸಂಗ್ರಹಕ್ಕೆ ಈ ಮೂರು ಕಡೆ ಪೆಟ್ರೋಲಿಯಂ ಸಚಿವಾಲಯ ಭೂಗತ ಸಂಗ್ರಹಗಾರ ಹೊಂದಿದೆ. ಏಪ್ರಿಲ್ನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾತೈಲ ಬೆಲೆ ಎರಡು ದಶಕಗಳ ಕನಿಷ್ಠ ಮಟ್ಟಕ್ಕೆ ಕುಸಿದಾಗ ಕೇಂದ್ರ ಸರ್ಕಾರ ಅಗ್ಗದ ಬೆಲೆಗೆ ತೈಲ ಖರಿದಿಸಿ ಈ ಮೂರು ಸಂಗ್ರಹಾಗಾರಗಳಿಗೆ ತುಂಬಿಸಿದೆ. ಈ ವೇಳೆ ಮಂಗಳೂರು ಮತ್ತು ಪಾದೂರಿನ ತೈಲ ಸಂಗ್ರಹಾಗಾರಗಳು ಅರ್ಧದಷ್ಟು ಖಾಲಿಯಾಗಿದ್ದವು, ವಿಶಾಖಪಟ್ಟಣದಲ್ಲಿ ಅಲ್ಪ ಪ್ರಮಾಣದ ಸಂಗ್ರಹಕ್ಕೆ ಜಾಗವಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ 5000 ಕೋಟಿ ರೂ ವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್ ಮಾಡಿದೆ.
ಮಂಗಳೂರು, ಪಾದೂರು, ವಿಶಾಖಪಟ್ಟಣ ಪೈಕಿ ಪಾದೂರು ಘಟಕವೇ ದೊಡ್ಡದು. ಈ ಮೂರು ಘಟಕಗಳಲ್ಲಿ 53 ದಶಲಕ್ಷ ಲಕ್ಷ ಟನ್ ತೈಲ ಸಂಗ್ರಹಿಸಬಹುದು. 9.5 ದಿನ ದೇಶಕ್ಕೆ ತೈಲವನ್ನು ನೀಡಬಹುದು..