ಕಾಪು : ಇಲ್ಲಿನ ತಾಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಸ್ವಾತಂತ್ರೋತ್ಸವ ಸೋಮವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ‍್ಯೋತ್ಸವದ ಸಂದೇಶ ನೀಡಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿ ಶುಭಾಶಂಸನೆಗೈದರು.
ಸಾಧಕರಾದ ನಾಟಿ ವೈದ್ಯೆ ಶಾಲಿನಿ, ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ, ನಿವೃತ್ತ ಹಿರಿಯ ಸೈನಿಕ ಜೆರೋಮ್ ಕೊಮೋಡೋರ್ ಕೆಸ್ತಲಿನೋ ಮತ್ತು ಜಾನಪದ ಕಲಾವಿದ ಗುರುಚರಣ್ ಪೊಲಿಪು ಇವರರನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಕಾಪು ಪುರಸಭಾಧಿಕಾರಿ ವೆಂಕಟೇಶ್ ನಾವಡ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಶಿಕ್ಷಣ ಇಲಾಖೆಯ ಶಂಕರ ಸುವರ್ಣ, ಕಾಪು ಪೋಲಿಸ್ ವೃತ್ತ ನಿರೀಕ್ಷಕ ಪೂವಯ್ಯ ಕೆಸಿ, ಶಿರ್ವ ಠಾಣಾಧಿಕಾರಿ ರಾಘವೇಂದ್ರ, ಕಾಪು ಠಾಣಾಧಿಕಾರಿ ಶ್ರೀ ಶೈಲ ಮುರುಗೊಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್, ಪುರಸಭಾ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.