ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ - ಮಂಡೇಡಿ ಕೆ. ಸದಾನಂದ ಶೆಟ್ಟಿ ಯವರಿಗೆ ಸನ್ಮಾನ

Posted On: 16-08-2022 05:18PM

ಕಾಪು : ಮಂಡೇಡಿ ಶ್ರೀದೇವಿ ಭಜನಾಮಂಡಳಿ ಹಾಗೂ ಮಂಡೇಡಿ ಅಂಗನವಾಡಿಯ ಜಂಟಿ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಕೆ. ಸದಾನಂದ ಶೆಟ್ಟಿ ಯವರು ಧ್ವಜಾರೋಹಣ ಮಾಡುವ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡೇಡಿ ಶ್ರೀದೇವಿ ಭಜನಾಮಂಡಳಿ ಹಾಗೂ ಗ್ರಾಮಸ್ಥರ ಪರವಾಗಿ ಕೆ ಸದಾನಂದ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಮಾಜಿಗವರ್ನರ್ ವಿ. ಜಿ. ಶೆಟ್ಟಿ ಮಾತನಾಡಿ ಸದಾನಂದ ಶೆಟ್ಟಿ ಯವರು ಗ್ರಾಮದ ಎಲ್ಲಾ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಊರಿನ ಜನರಿಗೆ ಮಾರ್ಗದರ್ಶಕರಾಗಿದ್ದರು. ಇವರನ್ನು ಸನ್ಮಾನಿಸಲು ಸಿಕ್ಕ ಅವಕಾಶ ನಮ್ಮೆಲ್ಲರ ಭಾಗ್ಯವೆಂದು ಅವರಗುಣಗಾನ ಮಾಡಿದರು.

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಸುರೇಶ ಶೆಟ್ಟಿ, ಇನ್ನಂಜೆ ಸಿ. ಎ ಬ್ಯಾಂಕ್ ನ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಉಡುಪಿ ಮಿಡ್ ಟೌನ್ ಲಯನ್ಸ್ ಅಧ್ಯಕ್ಷೆ ವೀಣಾ ಜೀವನ್ ಶೆಟ್ಟಿ, ಇನ್ನಂಜೆ ರೋಟರಿ ಸಮುದಾಯದಳದ ಅಧ್ಯಕ್ಷ ಪ್ರಶಾಂತ ಶೆಟ್ಟಿ ಹಾಗೂ ಭಜನಾಮಂಡಳಿಯ ಪದಾಧಿಕಾರಿಗಳು, ಸರ್ವಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಭಜನಾಮಂಡಳಿಯ ಅಧ್ಯಕ್ಷರಾದ ಲಕ್ಷ್ಮಣ ಕೆ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಅಂಗನವಾಡಿ ಕಾರ್ಯಕರ್ತೆ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.