ಪಡುಬಿದ್ರಿ : ಅದಮಾರು ಪೂರ್ಣಪ್ರಜ್ಞ ಪಿಯು ಕಾಲೇಜು ಇಲ್ಲಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಉಡುಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಮತ್ತು ಅದಮಾರು ಪೂರ್ಣಪ್ರಜ್ಞ ಪಿಯು ಕಾಲೇಜು ಇವರ ಸಹಯೋಗದಲ್ಲಿ ಉಡುಪಿ ವಲಯ ಮಟ್ಟದ ಬಾಲಕಿಯರ ಖೋ - ಖೋ ಪಂದ್ಯಾಟ ಗುರುವಾರ ನಡೆಯಿತು. ಈ ಪಂದ್ಯಾಟಕ್ಕೆ ಖ್ಯಾತ ಉದ್ಯಮಿ ಪುಣೆಯ ನಾರಾಯಣ ಶೆಟ್ಟಿ ಎರ್ಮಾಳು ಚಾಲನೆ ನೀಡಿದರು.
ಉಡುಪಿ ವಲಯದ ೧೨ ಬಾಲಕಿಯರ ಖೋ ಖೋ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಿ ಪ್ರವೀಣ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಪೂರ್ಣಪ್ರಜ್ಞ ಅದಮಾರಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎರ್ಮಾಳು ಉದಯ ಕೆ ಶೆಟ್ಟಿ, ಆದರ್ಶ ಯುವಕ ಮಂಡಳ ಅಧ್ಯಕ್ಷ ಬರ್ಪಾಣಿ ಸಂತೋಷ ಶೆಟ್ಟಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ತಾಲ್ಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಕಾಪು ತಾಲ್ಲೂಕು ಕ್ರೀಡಾ ಸೇವಾ ಯುವಜನ ಅಧಿಕಾರಿ ರಿತೇಶ್ ಶೆಟ್ಟಿ, ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಸತೀಶ್ ಸಾಲಿಯಾನ್, ಪ್ರಾಂಶುಪಾಲ ಎಂ ರಾಮಕೃಷ್ಣ ಪೈ, ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಮುಖ್ಯಶಿಕ್ಷಕಿ ಲಕ್ಷ್ಮಿ ನಾಯಕ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ನಿಶ್ಮಿತಾ ಶೆಟ್ಟಿ, ಪಂಚಾಯತ್ ಸದಸ್ಯ ಮನೋಜ್ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕ ಶ್ರೀಕಾಂತ್ ರಾವ್ ಸ್ವಾಗತಿಸಿದರು. ಶಿಕ್ಷಕಿ ಪ್ರತಿಮಾ ಭಟ್ ಕಾರ್ಯಕ್ರಮ ನಿರೂಪಿದರು. ದೈಹಿಕ ಶಿಕ್ಷಕ ಸಂದೀಪ್ ಕುಮಾರ್ ವಂದಿಸಿದರು.