ಡಾ| ಅಣ್ಣಯ್ಯ ಕುಲಾಲ್ ಗೆ ಡಿ. ದೇವರಾಜ ಅರಸು ಪ್ರಶಸ್ತಿ
Posted On:
19-08-2022 10:27PM
ಉಡುಪಿ : ಜಿಲ್ಲೆಯ ಕೋಟ ಬಳಿಯ ತೆಕ್ಕಟ್ಟೆ ಗ್ರಾಮದ ಡಾ| ಅಣ್ಣಯ್ಯ ಕುಲಾಲ್ ಸಮಾಜಮುಖಿ, ಜಾತ್ಯತೀತ ಚಿಂತನೆಯಿಂದ ಬಡವರು, ವೈದ್ಯಕೀಯ ಸೇವೆ ನೀಡುವ ಮೂಲಕ ಕರಾವಳಿ-ಮಲೆನಾಡು ಭಾಗವಲ್ಲದೆ ರಾಜ್ಯವ್ಯಾಪಿ ಉತ್ತಮ ವೈದ್ಯ ಹಾಗೂ ಸಮಾಜ ವಿಜ್ಞಾನಿ ಎಂದು ಗುರುತಿಸಿಕೊಂಡಿದ್ದಾರೆ. ಇವರು 2022-23 ಸಾಲಿನ ಡಿ. ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಪುರಸ್ಕಾರವನ್ನು ಒಳಗೊಂಡಿದೆ.
ಆಗಸ್ಟ್ 20ರಂದು ವಿಧಾನ ಸೌಧದಲ್ಲಿ ಆಯೋಜಿಸಲಾಗಿರುವ ದೇವರಾಜ ಅರಸು 107ನೇ ಜನ್ಮದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಇವರು ಶ್ರೀನಿವಾಸ್ ಯೂನಿವರ್ಸಿಟಿ ಹಾಗೂ ಶ್ರೀನಿವಾಸ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ಪ್ರಸ್ತುತ ಕೇಂದ್ರ ಸರಕಾರದ ಆರೋಗ್ಯ ಯೋಜನೆಯಡಿ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸಂಬಂಧಿತ ಪ್ಯಾಲಿಯೇಟೀವ್ ವಿಭಾಗದಲ್ಲಿ ಬಡವರಿಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ.