ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಜೆಸಿಐ ವತಿಯಿಂದ ಮುದ್ದು ಕೃಷ್ಣ ‌ವೇಷ ಸ್ಪರ್ಧೆ

Posted On: 19-08-2022 10:36PM

ಕಾಪು : ಜೆಸಿಐ ನೇತೃತ್ವದಲ್ಲಿ ದಿ. ಜಗದೀಶ್ ಆಚಾರ್ಯ ಇವರ ಸ್ಮರಣಾರ್ಥ ಕಾಪು ಜಯಲಕ್ಷ್ಮೀ ಜ್ಯುವೆಲ್ಲಸ್೯ ಪ್ರಾಯೋಜಕತ್ವದಲ್ಲಿ ಆಗಸ್ಟ್ 19ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು.‌ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ‌. ವಾಸುದೇವ ಶೆಟ್ಟಿ ಮಾತನಾಡಿ, ಕಾಪು ಪರಿಸರದಲ್ಲಿ ನಿರಂತರ ಸೇವಾ ಚಟುವಟಿಕೆಗಳನ್ನು ನಡೆಸುವ ಮೂಲಕ ಜೇಸಿಐ ಕಾಪು ಜನಮಾನಸದಲ್ಲಿ ಉತ್ತಮ ಹೆಸರು ಗಳಿಸಿದೆ. ರಜತ ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯು ಪ್ರತೀ ವರ್ಷ ನಡೆಸುತ್ತಿರುವ ಮುದ್ದುಕೃಷ್ಣ ವೇಷ ಸ್ಪರ್ಧೆಯು ಭಾಂಧವ್ಯ ವೃದ್ಧಿಗೆ ಕಾರಣವಾಗಲಿ ಎಂದರು.

ಜೇಸಿಐ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕ ಮಂಜುನಾಥ ದೇವಾಡಿಗ ಉಪ್ಪುಂದ, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಸುರೇಖಾ ಜೆ. ಆಚಾರ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮ ನಿರ್ದೇಶಕ ಜಗದೀಶ್ ಬಂಗೇರ, ಮಹಿಳಾ ಜೇಸಿ ನಿರ್ದೇಶಕಿ ಶ್ರುತಿ ಶೆಟ್ಟಿ, ಯುವ ಜೇಸಿ ಅಧ್ಯಕ್ಷ ಆದಿತ್ಯ ಗುರ್ಮೆ ಹಾಗೂ ಕಾಪು ಜೇಸಿಐನ ಪೂರ್ವಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾಪು ಜೇಸಿಐ ಅಧ್ಯಕ್ಷ ಸುಜಿತ್ ಶೆಟ್ಟಿ ಸ್ವಾಗತಿಸಿದರು. ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಪ್ರಸ್ತಾವನೆಗೈದರು. ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ ವಂದಿಸಿದರು. 3 ವರ್ಷಕ್ಕಿಂತ ಕೆಳಗಿನ ವಿಭಾಗ, ಅಂಗನವಾಡಿ, ಎಲ್ ಕೆ ಜಿ ಮತ್ತು ಯು ಕೆ ಜಿ ವಿಭಾಗ ಹಾಗೂ 1 ನೇ ಮತ್ತು 2 ನೇ ತರಗತಿಯ ಮಕ್ಕಳಿಗಾಗಿ ಮುದ್ದು ಕೃಷ್ಣ ‌ವೇಷ ಸ್ಪರ್ಧೆ ಜರಗಿತು. ಪ್ರಕಾಶ್ ಸುವರ್ಣ ಕಟಪಾಡಿ, ಅಶ್ವಿನಿ ಬಂಗೇರ, ಗಾಯತ್ರಿ‌ ಆಚಾರ್ಯ ತೀರ್ಪುಗಾರರಾಗಿ ಸಹಕರಿಸಿದರು.