ಕಟಪಾಡಿ : ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ ಡೆನ್ನಾನ ಡೆನ್ನನ ಸಂಪನ್ನ
Posted On:
21-08-2022 11:54PM
ಕಟಪಾಡಿ : ಅಂತರ್ ಜಿಲ್ಲೆಯಲ್ಲಿ 33 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಅಂತರ್ ಘಟಕ ಸಾಂಸ್ಕೃತಿಕ ಕಾರ್ಯಕ್ರಮವಾಗಿರುವ ಡೆನ್ನಾನ ಡೆನ್ನನ ಆಗಸ್ಟ್ 21 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ಸಂಪನ್ನಗೊಂಡಿತು.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ ಡೆನ್ನಾನ ಡೆನ್ನನ ತುಳುನಾಡಿನ ಪ್ರತೀಕ. ಯುವ ಸಮುದಾಯದ ದೇಶ ನಮ್ಮದು. ಸಾಂಸ್ಕೃತಿಕ, ಕ್ರೀಡೆಯ ಮೂಲಕ ಯುವ ಸಮುದಾಯವನ್ನು ಆಕರ್ಷಿಸಲು ಸಾಧ್ಯ. ಬಿಲ್ಲವ ಸಮಾಜ ಕೋಟಿ ಚೆನ್ನಯ ಮತ್ತು ಕಾಂತಾಬಾರೆ ಬುದಬಾರೆಯರ ಆರಾಧನೆಯ ಮೂಲಕ ಸಂಘಟಿತರಾಗಬೇಕಾಗಿದೆ. ಸಮಾಜದ ಸಂಘಟನೆಗಳು ಸಮಾಜದ ಏಳಿಗೆಗೆ ಶ್ರಮಿಸಬೇಕಿದೆ ಎಂದರು.
ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಕೋಶಾಧಿಕಾರಿ ಪದ್ಮರಾಜ್ ಆರ್ ಮಾತನಾಡಿ ಸ್ಪರ್ಧೆಗಳಲ್ಲಿ
ಭಾಗವಹಿಸುವುದು ಮುಖ್ಯ. ಬಹುಮಾನದ ವಿಚಾರವಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ಸಂಘಟಿಸುವ ಮೂಲಕ ಯುವವಾಹಿನಿ ಗೆದ್ದಿದೆ. ಯುವವಾಹಿಯ ಮೂಲಕ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ತಂದು ನಾರಾಯಣಗುರುಗಳ ತತ್ವ ಸಂದೇಶ ಸಾರಬೇಕಾಗಿದೆ ಎಂದರು.
ಡೆನ್ನಾನ ಡೆನ್ನನ -2022 ವಿಜೇತರು : ಯುವವಾಹಿನಿಯ 20 ಘಟಕಗಳು ಸ್ಪರ್ಧಿಸಿದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಘಟಕ ರೂ.25,000 ನಗದಿನೊಂದಿಗೆ ಪ್ರಥಮ ಬಹುಮಾನ, ಹಳೆಯಂಗಡಿ ಘಟಕ ರೂ.15,000 ನಗದಿನೊಂದಿಗೆ ದ್ವಿತೀಯ, ಪಣಂಬೂರು ಕುಳಾಯಿ ಘಟಕ ರೂ.10,000 ನಗದಿನೊಂದಿಗೆ ತೃತೀಯ ಬಹುಮಾನ ಪಡೆಯಿತು.
ವೈಯಕ್ತಿಕವಾಗಿ ಶ್ರೇಷ್ಠ ನಿರ್ವಹಣೆ ನೀಡಿದ ನಿರ್ಮಿತಾ ಹಳೆಯಂಗಡಿ ಘಟಕ, ಶ್ರವಣ್ ಕುಮಾರ್ ಪಡುಬಿದ್ರಿ ಘಟಕ, ಚಂದ್ರಹಾಸ್ ಬೆಳ್ತಂಗಡಿ ಘಟಕ, ಯುವರಾಜ್ ಬೆಳ್ತಂಗಡಿ ಘಟಕ ಮತ್ತು ರಿದ್ವಿ ಡಿ ಪೂಜಾರಿ ಪಣಂಬೂರು ಕುಳಾಯಿ ಘಟಕ, ಮೋಕ್ಷ್ ಮಾಣಿ ಘಟಕ ಬಾಲ ನಟ ವಿಶೇಷ ಬಹುಮಾನ ಪಡೆದರು.
ಆಗಸ್ಟ್ ತಿಂಗಳಲ್ಲಿ ನಡೆಸಲಾಗಿದ್ದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ, ಭಾಷಣ, ಪ್ರಬಂಧ ಏರ್ಪಡಿಸಲಾಗಿದ್ದು, ಇದರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ನಾರಾಯಣಗುರು ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲೆಯ ಬಿಲ್ಲವ ಪರಿಷತ್ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ, ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳ್, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ.ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್, ಮಹಾಬಲ ಅಮೀನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದ್ದರು.
ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ. ಪೂಜಾರಿ ಸ್ವಾಗತಿಸಿದರು. ರೇಣುಕಾ ಕಣಿಯೂರು ಮತ್ತು ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.