ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಗಸ್ಟ್ 25 : ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

Posted On: 22-08-2022 08:19PM

ಉಡುಪಿ : ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.