ಪಣಿಯೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸಮಗ್ರ ಜೀರ್ಣೋದ್ಧಾರದ ಸಂಕಲ್ಪದೊಂದಿಗೆ ಹೂವಿನ ಪೂಜೆ ಮತ್ತು ಜೀರ್ಣೋದ್ಧಾರ ಮನವಿ ಪತ್ರ ಬಿಡುಗಡೆ ಸಮಾರಂಭವು ಮಂಗಳವಾರ ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿ ನಡೆಯಿತು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮನವಿ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಶಾಸಕರ ಇತಿಮಿತಿಯೊಳಗೆ ಸರಕಾರದಲ್ಲಿ ಸಿಗುವ ಅನುದಾನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯನ್ನ ಮಾಡುವುದಾಗಿ ಭರವಸೆ ನೀಡಿದರು.
ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ, ದ. ಕ. ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಟ್ಟಿಗೆ ವೆಂಕಟರಾಜ ತಂತ್ರಿ, ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಪಣಿಯೂರುಗುತ್ತು, ಕೊರಗ ಶೆಟ್ಟಿ ಬುಳಿಬೆಟ್ಟುಗುತ್ತು, ದೇವಿಪ್ರಸಾದ್ ಶೆಟ್ಟಿ ಬಡಕರಗುತ್ತು, ಜಗನ್ನಾಥ ಪೂಜಾರಿ, ಸುರೇಂದ್ರ ಪಣಿಯೂರು, ಮುಂಬಯಿ ಸಮಿತಿ ಅಧ್ಯಕ್ಷ ಸುಕುಮಾರ್ ಶೆಟ್ಟಿ ನಡಿಮನೆ ಮೊದಲಾದವರು ಉಪಸ್ಥಿತರಿದ್ದರು.
ಡಾ. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಕರುಣಾಕರ ಶೆಟ್ಟಿ ವಂದಿಸಿದರು.