ಹೆಜಮಾಡಿ : ಗ್ರಾಮ ಪಂಚಾಯತ್ ಹೆಜಮಾಡಿ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ 'ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ' ಬಗ್ಗೆ ಮಾಹಿತಿ ಹಾಗೂ ನೋಂದಾವಣಿ ಕಾರ್ಯಕ್ರಮಕ್ಕೆ ಮಂಗಳವಾರ ಶಾಸಕರಾದ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉಪಾಧ್ಯಕ್ಷೆ ಪವಿತ್ರ ಗಿರೀಶ್, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಹೆಜಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್ ಅಲಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಪಿ. ಕೆ. ಸದಾನಂದ, ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹೇಮಂತ್ ಕುಮಾರ್, ಕಾರ್ಯಕ್ರಮದ ಸಂಯೋಜಕ ಪ್ರಾಣೇಶ್ ಹೆಜಮಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.