ಕಳತ್ತೂರು : ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಸಭೆಯು ಗ್ರಾಮ ಆರೋಗ್ಯ ಸಮಿತಿ ಅಧ್ಯಕ್ಷ ಜನಾರ್ಧನ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.
ಸಮಾಜಸೇವಾ ವೇದಿಕೆಯ ಅಧ್ಯಕ್ಷ ಫಾರೂಕ್ ಚಂದ್ರನಗರ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭ ಅವರು ಮಾತನಾಡಿ ಕಳತ್ತೂರು ಚಂದ್ರ ನಗರದ ಆರೋಗ್ಯ ಕೇಂದ್ರಗಳಿಗೆ ಕೊರೋನಾ ಸಂದರ್ಭ ಸಂಸ್ಥೆ ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿಯೂ ಸಹಕಾರ ಮುಂದುವರಿಯಲಿದೆ ಎಂದರು.
ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯೆ ದಿವ್ಯ ಶೆಟ್ಟಿಗಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿ ಸುಧಾವತಿ, ಜಾನ್ಸನ್ ಕರ್ಕಡ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶ್ರೀ ಶಕ್ತಿ ಗುಂಪಿನ ಸದಸ್ಯರು, ಗ್ರಾಮ ನೈರ್ಮಲ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.