ಕಾಪು : ಟೀಮ್ ಮೋದಿ ಕಾಪು ವತಿಯಿಂದ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಇವರ ಹುಟ್ಟು ಹಬ್ಬದ ಪ್ರಯುಕ್ತ ಬುಧವಾರ
ಹೂವಿನ ಪೂಜೆ ಜರಗಿತು.
ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯ್ ಕೊಡವೂರು, ಟೀಮ್ ಮೋದಿ ಕಾಪು ತಂಡದ ಅಧ್ಯಕ್ಷರಾದ ಯೋಗೀಶ್ ಪೂಜಾರಿ, ಉದ್ಯಮಿ ಪ್ರಭಾಕರ ಪೂಜಾರಿ ಮತ್ತು ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಟೀಮ್ ಮೋದಿ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.