ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಂಡಾರು ಪೆರಿಯ ಕಲ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾಪನೆ

Posted On: 10-06-2020 10:51AM

ಇನ್ನಂಜೆ ಗ್ರಾಮದ ಉಂಡಾರುವಿನ ಕಾರ್ಣಿಕದ ದೈವ ಪೆರಿಯ ಕಲದ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳಾದ ಕಂಬೆರ್ಲು, ಜುಮಾದಿ, ಬಂಟ, ತನ್ನಿಮಾನಿಗ, ಅಜ್ಜಿ ಬೇರೆಂತೆಲ್, ಕೊರಗಜ್ಜ, ಗುಳಿಗ ದೈವಗಳ ಸಹಿತ ಬ್ರಹ್ಮೆರ್ ಪುನರ್ ಪ್ರತಿಷ್ಠೆ ಕಾಯಕ್ರಮವು ಇಂದು ಆಡಳಿತ ಮಂಡಳಿ ಮತ್ತು ಊರ ಜನರ ಸಮ್ಮುಖದಲ್ಲಿ ವಿಧಿವತ್ತಾಗಿ ನಡೆಯಿತು.. ದಿನಾಂಕ 09-06-2020 ರಂದು ಸಂಜೆ ವಾಸ್ತು ಹೋಮ, ಅಘೋರ ಹೋಮ ಹಾಗೂ ಇತರೆ ವಾಸ್ತುವಿಗೆ ಸಂಬಂಧಪಟ್ಟ ಪೂಜೆಗಳು ಬ್ರಹ್ಮಶ್ರೀ ನಾಗರಾಜ ತಂತ್ರಿಗಳ ಉಪಸ್ಥಿತಿಯಲ್ಲಿ ಸಾಂಗವಾಗಿ ನೆರೆವೇರಿದವು. ತಾತ್ಕಾಲಿಕ ಶೆಡ್ ವ್ಯವಸ್ಥೆಯಲ್ಲಿದ್ದ ದೈವಗಳನ್ನು ಜೀರ್ಣೋದ್ದಾರಗೊಂಡ ಗುಡಿಯ ಒಳಗೆ ಪುನರ್ ಪ್ರತಿಷ್ಠೆ ಮಾಡಲಾಯಿತು, ಪುನರ್ ಪ್ರತಿಷ್ಠೆಗೊಂಡ ದೈವಗಳಿಗೆ ದರ್ಶನ ಸೇವೆ ನೀಡಲಾಯಿತು. ಸರ್ಕಾರದ ಆದೇಶದ ಮೇರೆಗೆ ಈ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಮತ್ತು sanitizer ಬಳಸಿಕೊಂಡು ನಡೆಯಿತು. ಪೆರಿಯ ಕಲದ ಜೀರ್ಣೋದ್ದಾರ ಕಾರ್ಯಕ್ಕೆ ದೇಣಿಗೆ ನೀಡುವವರು ನೀಡಬಹುದು. ಬ್ಯಾಂಕ್ ಖಾತೆ ವಿವರ Account No-0636101016108 IFSC Code-CNRB0000636 Account Name-Shree Babbuswamy Matthu Parivara Bank Branch-CANARA Bank Shankarapura.