ಉಚ್ಚಿಲ : ರೇಬೀಸ್ ಹಾಗೂ ಪ್ರಾಣಿಜನ್ಯ ರೋಗದ ಕುರಿತು ಮಾಹಿತಿ ಕಾರ್ಯಕ್ರಮ
Posted On:
27-08-2022 04:26PM
ಉಚ್ಚಿಲ : ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಾಪು, ಜಿಲ್ಲಾ ಪ್ರಾಣಿ ದಯಾ ಸಂಘ ಉಡುಪಿ ಇವರ ಸಹಯೋಗದೊಂದಿಗೆ ಸರಸ್ವತಿ ಮಂದಿರ ಹೈಸ್ಕೂಲ್ ಉಚ್ಚಿಲ, ರೋಟರಿ ಕ್ಲಬ್ ಉಚ್ಚಿಲ ಇವರ ಸಂಯುಕ್ತಾಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ್ ಅಂಗವಾಗಿ ರೇಬೀಸ್ (ಹುಚ್ಚುನಾಯಿ ರೋಗ) ಹಾಗೂ ಪ್ರಾಣಿಜನ್ಯ ರೋಗದ ಕುರಿತು ಮಾಹಿತಿ ಕಾರ್ಯಕ್ರಮ ಸರಸ್ವತಿ ಮಂದಿರ ಹೈಸ್ಕೂಲ್ ಉಚ್ಚಿಲ ಇಲ್ಲಿ ಜರಗಿತು.
ಕಾಪುವಿನ ಪಶು ವೈದ್ಯರಾದ ಡಾ| ಅರುಣ್ ಹೆಗಡೆ
ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ಉಚ್ಚಿಲ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಸತೀಶ್ ಕುಲಾಲ್ ವಹಿಸಿದ್ದರು.
ಹಿರಿಯ ಶಿಕ್ಷಕರಾದ ಸದಾಶಿವ ನಾಯಕ್, ಶಾಲಾ ವಿದ್ಯಾರ್ಥಿ ನಾಯಕ ಅಜ್ಜಯ್ಯ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಬಿ ಎಸ್ ಆಚಾರ‍್ಯ ಕಾರ‍್ಯಕ್ರಮ ನಿರ್ವಹಿಸಿ, ವಂದಿಸಿದರು.