ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಗ್ರಾಮ ಒನ್ ಯೋಜನೆ - ಒಂದೇ ಸೂರಿನಡಿ ಸೌಲಭ್ಯ

Posted On: 27-08-2022 04:56PM

ಉಡುಪಿ : ಜಿಲ್ಲೆಯಲ್ಲಿ ಗ್ರಾಮ ಒನ್‌ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಯಡಿ ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಎ.ಬಿ.ಎಚ್.ಎ. ಕಾರ್ಡ್ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಈ ಕಾರ್ಡ್ ಹೊಂದಿದ ಫಲಾನುಭವಿಗಳು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 5 ಲಕ್ಷ ರೂ. ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಹಾಗೂ ಚಿಕಿತ್ಸೆಯ ಮಾಹಿತಿಯೂ ಕೂಡ ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ. ಕಾರ್ಡ್ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.