ಉದ್ಯಾವರ : ಹಿರಿಯರ ದಿನಾಚರಣೆ
Posted On:
30-08-2022 10:32AM
ಉದ್ಯಾವರ : ಕೆಥೊಲಿಕ್ ಸಭಾ ಉದ್ಯಾವರ ಇವರ ನೇತೃತ್ವದಲ್ಲಿ ಸ್ತ್ರೀ, ಕುಟುಂಬ ಮತ್ತು ಯುವ ಆಯೋಗದ ಸಹಕಾರದೊಂದಿಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವ್ಯಾಪ್ತಿಯ ಹಿರಿಯರ ದಿನವನ್ನು ಝೇವಿಯರ್ ಸಭಾಭವನದಲ್ಲಿ ಆಚರಿಸಲಾಯಿತು.
ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಮತ್ತು ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಪ್ರಧಾನ ಧರ್ಮಗುರುಗಳಾದ ಅ. ವಂ. ಫಾ. ಸ್ಟಾನಿ ಬಿ ಲೋಬೊ, ಸಹಾಯಕ ಧರ್ಮಗುರು ವಂ. ಫಾ. ಲಿಯೋ ಪ್ರವೀಣ್, ಕಾಪುಚಿನ್ ಧರ್ಮಗುರು ವಂ. ಫಾ. ಚಾರ್ಲ್ಸ್ ಸಲ್ದಾನ ಇವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆ ನಡೆಯಿತು.
ಬಳಿಕ ಸ್ಥಳೀಯ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರನ್ನು ಅದ್ದೂರಿಯಾಗಿ ಸಭಾ ಭವನದ ಒಳಗೆ ಕರೆತರಲಾಯಿತು. ಹಿರಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದ ಸಂಘಟಕರು, ವಿಜೇತರಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಂ. ಫಾ. ಸ್ಟ್ಯಾನಿ ಬಿ ಲೋಬೊ, ದೇವಾಲಯದಲ್ಲಿ ವಿವಿಧ ಸೇವೆ ಸಲ್ಲಿಸಿದ ಎಲ್ಲ ಹಿರಿಯರನ್ನು ಸ್ಮರಿಸಿ ದರು. ಹಿರಿಯರ ಸಂಘಕ್ಕೆ ತಾವು ಸೇರ್ಪಡೆಯಾಗಿ, ಜೊತೆಯಾಗಿ ನಿಮ್ಮ ಸುಖ ದುಃಖಗಳನ್ನು ಹಂಚಿಕೊಳ್ಳಿ. ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಹಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ಸ್ ಇನ್ ಸ್ಟಿಟ್ಯೂಷನ್ ನ ಡೀನ್ ಡಾ. ಉರ್ಬನ್ ಡಿಸೋಜ, ಕಥೋಲಿಕ್ ಸಭಾ ಕೇಂದ್ರೀಯ ಅಧ್ಯಕ್ಷೆ ಮೇರಿ ಡಿಸೋಜ, ಉಪಾಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮೆಲ್ವಿನ್ ನೋರೊನ್ನ, 20 ಆಯೋಗಗಳ ಸಂಯೋಜಕ ಜೆರಾಲ್ಡ್ ಪಿರೇರಾ, ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಕಾರ್ಯದರ್ಶಿ ಟೆರೆನ್ಸ್ ಪಿರೇರಾ, ಉಸ್ತುವಾರಿ ಲಾರೆನ್ಸ್ ಡೇಸಾ, ಕುಟುಂಬ ಆಯೋಗದ ವಿಲ್ಫ್ರೆಡ್ ಕ್ರಾಸ್ಟೊ, ಸ್ತ್ರೀ ಆಯೋಗದ ಐರಿನ್ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು.
ಅನಿಲ್ ಮಿನೇಜಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೈಕಲ್ ಡಿಸೋಜಾ ಮತ್ತು ಸ್ಟೀವನ್ ಕುಲಾಸೊ ಸಹಕರಿಸಿದರು. ಯುವ ಆಯೋಗ ಸಂಯೋಜಕ ರೋಯ್ಸ್ ಫೆರ್ನಾಂಡಿಸ್ ವಂದಿಸಿದರು.