ಕಾಪು : ಅನಾರೋಗ್ಯದಿಂದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಯುವಕರು
Posted On:
02-09-2022 09:32AM
ಕಾಪು : ಇಲ್ಲಿನ ಮಲ್ಲಾರು ಕೊಂಬ ಗುಡ್ಡೆಯಲ್ಲಿ ವಾಸವಾಗಿದ್ದ ಅನಾರೋಗ್ಯದಿಂದ ಇದ್ದ ಒಂಟಿ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಕಾಪುವಿನ ಯುವಕರು ಮಾನವೀಯತೆ ಮೆರೆದಿದ್ದಾರೆ.
ಆಶಾ ಕಾರ್ಯಕರ್ತೆ ಉಷಾ ಮಲ್ಲಾರು ಮಾಹಿತಿಯ ಮೇರೆಗೆ ಕಾಪುವಿನ ಮಲ್ಲಾರು ಕೊಂಬ ಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದ ಲೀಲಾವತಿ ಪೂಜಾರಿಯವರನ್ನು ಸಮಾಜ ಸೇವಕರಾದ ಪ್ರಶಾಂತ್ ಪೂಜಾರಿ ಮತ್ತವರ ತಂಡ ಉಡುಪಿಯ ಅಜ್ಜರ ಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಕ್ಕಳಿಲ್ಲದ ಲೀಲಾವತಿ ಪೂಜಾರಿಯವರ ಪತಿ ತೀರಿಕೊಂಡಿದ್ದು, ಕೊಂಬಗುಡ್ಡೆಯ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಇದೀಗ ಅವರು ಅನಾರೋಗ್ಯಗೊಂಡಿದ್ದು, ವಾರೀಸುದಾರರಿಲ್ಲದ ಲೀಲಾವತಿಯವರನ್ನು ಪ್ರಶಾಂತ್ ಪೂಜಾರಿ ಮತ್ತು ಅವರ ಸಂಗಡಿಗರು ಉಡುಪಿಯ ಅಜ್ಜರ ಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂದರ್ಭ ಪುರಸಭಾ ಸದಸ್ಯ ಉಮೇಶ್ ಪೂಜಾರಿ ಮಲ್ಲಾರು, ಸಚಿನ್ ಶೆಟ್ಟಿ, ಶಿವಾನಂದ ಪೂಜಾರಿ, ಶ್ಯಾರೊನ್ ನಿಶಿತ ಮಲ್ಲಾರು, ಆಶಾ ಕಾರ್ಯಕರ್ತೆ ಉಷಾ ಮಲ್ಲಾರು, ಉಮೇಶ್ ಕರ್ಕೇರ, ಮಲ್ಲಾರು ಆಸ್ಪತ್ರೆಗೆ ದಾಖಲಿಸುವ ಸಂದರ್ಭ ಸಹಕರಿಸಿದ್ದಾರೆ.