ಕಾಪು : ಇಲ್ಲಿನ ಪುರಸಭಾ ವತಿಯಿಂದ ಮೂರು ಲಕ್ಷ ರೂ. ಅನುದಾನದಲ್ಲಿ ಕಾಪು ಪೇಟೆಯಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಕ್ ದೀಪವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಗುರುವಾರ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕಾಪು ಪೇಟೆಯ ಮಾರುಕಟ್ಟೆಗೆ ಪ್ರವೇಶಿಸುವ ಪ್ರದೇಶವು ಸಂಪೂರ್ಣ ಕತ್ತಲಿನಲ್ಲಿದ್ದ ಈ ಬಗ್ಗೆ ಸ್ಥಳೀಯ ವ್ಯಾಪಾರಸ್ಥರು ಮತ್ತು ಪುರಸಭಾ ಸದಸ್ಯರ ಬೇಡಿಕೆಯಿತ್ತು. ಅದರಂತೆ ಪುರಸಭೆ ಅಧಿಕಾರಿಗಳು ಕೂಡಾ ಪ್ರಸ್ತಾವನೆ ಸಲ್ಲಿಸಿದ್ದು ಅದರಂತೆ ಹೈಮಾಸ್ಕ್ ದೀಪ ಅಳವಡಿಸಲಾಗಿದೆ. ಕಾಪು ಪುರಸಭೆ ವ್ಯಾಪ್ತಿಯ ಇನ್ನೂ ಎರಡು ಪ್ರದೇಶಗಳಲ್ಲಿ ಹೈಮಾಸ್ಕ್ ದೀಪ ಅಳವಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.
ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು, ಪುರಸಭೆ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ ಪಾದೂರು, ಶೈಲೇಶ್ ಅಮೀನ್, ರತ್ನಾಕರ ಶೆಟ್ಟಿ, ನಾಗೇಶ್, ಫರ್ಜಾನ, ಶೋಭಾ ಬಂಗೇರ, ರಾಧಿಕಾ ಸುವರ್ಣ, ಕಾಪು ಗ್ರಾ.ಪಂ. ಮಾಜಿ ಅಧ್ಯಕ್ಷ ಯೋಗೀಶ್ ರೈ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ಇಂಜಿನಿಯರ್ ನಯನ್ ತಾರಾ, ಕಾಪು ಪುರಸಭೆ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಸ್ಥಳೀಯರಾದ ಎಚ್. ಅಬ್ದುಲ್ಲಾ, ಅಬ್ದುಲ್ ನಜೀರ್, ಪಿ.ಕೆ. ಹೈದರ್ ಮಲ್ಲಾರು, ಜಗದೀಶ್ ಮೆಂಡನ್, ರಮೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.