ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66 ಪಕ್ಕದಲ್ಲಿರುವ ಕಾಮತ್ ಪೆಟ್ರೋಲ್ ಪಂಪ್ ಬಳಿಯ ನಬೀಲ್ ಕಾಂಪ್ಲೆಕ್ಸ್ ನಲ್ಲಿ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಮಾಲೀಕತ್ವದ ಶ್ರೀ ಸಾಯಿ ಹಾರ್ಡ್‌ವೇರ್ಸ್ ನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭ ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಪಡುಬಿದ್ರಿ ಉದ್ಯಮಿ ವೈ ಗೋಪಾಲ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಲ್ಲವಿ ಬಾರ್ ಆಂಡ್ ರೆಸ್ಟೋರೆಂಟ್ ಮಾಲಕರಾದ ಸಂತೋಷ್ ಕುಮಾರ್ ಶೆಟ್ಟಿ, ಎರ್ಮಾಳು ಪಂಚಾಯತ್ ಅಧ್ಯಕ್ಷರಾದ ಕಸ್ತೂರಿ ಪ್ರವೀಣ್, ಪುಣೆಯ ಉದ್ಯಮಿ ಚಂದ್ರಹಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.