ಕಾಪು : ಇಲ್ಲಿನ ಲಯನ್ಸ್ ಕ್ಲಬ್ ವತಿಯಿಂದ ಕರಂದಾಡಿ ಶ್ರೀರಾಮ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ನಿರ್ಮಲ್ ಕುಮಾರ್ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು. ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಶೆಟ್ಟಿ, ಕಾಪು ಲಯನ್ಸ್ ಕ್ಲಬ್ ಅಧ್ಯಕ್ಷ ಐ.ಬಿ. ಅಶೋಕ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಹರೀಶ್ ನಾಯಕ್, ವರುಣ್ ಶೆಟ್ಟಿ, ಉದಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.