ಕಾಪು : ಇಲ್ಲಿನ ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 168 ನೇ ಜಯಂತಿಯನ್ನು ಆಚರಿಸಲಾಯಿತು.
ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.
ಈ ಸಂದರ್ಭ ಕಾಪು ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ,
ಕಾಪು ಪುರಸಭಾ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಬಿಲ್ಲವರ ಸಹಾಯಕ ಸಂಘದ ಮಾಜಿ ಅಧ್ಯಕ್ಷ ಮಾಧವ ಆರ್ ಪಾಲನ್, ಮೂಳೂರು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ಮೋಹನ್ ಕಲ್ಯಾ, ಮೂಳೂರು ಬಿಲ್ಲವ ಸಂಘದ ಸದಸ್ಯರು, ಕಾಪು ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.