ಮುದರಂಗಡಿ : ಕಾಪು ತಾಲೂಕು ಸಾಂತೂರು ಗ್ರಾಮದ ಮುದರಂಗಡಿ ಮೀನು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಮಟ್ಕಾ ಆಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆಂದು ಬಂದ ಮಾಹಿತಿಯಂತೆ ಪಡುಬಿದ್ರಿ ಪೋಲಿಸರು ದಾಳಿ ನಡೆಸಿದ್ದಾರೆ.
ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಾ ಹಣ ಸಂಗ್ರಹಿಸುತ್ತಿದ್ದ, ದಿನೇಶ್ ಶೆಟ್ಟಿ ಎಂಬಾತನನ್ನು ದಸ್ತಗಿರಿ ಮಾಡಿ, ಅವನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ ನಗದು ರೂಪಾಯಿ 1,050, ಮಟ್ಕಾ ನಂಬ್ರ ಬರೆದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.