ಉಡುಪಿ : ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತವಾಗಿ ಸೆ. 13ರಂದು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಮತ್ತು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಗಂಟೆಗೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಲಿದೆ ಎಂದು ಗೌರವಾಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.