ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವಸಂಗಮ ಮತ್ತು ಮಹಿಳಾ ಬಳಗದ ಮಹಾಸಭೆ
Posted On:
13-09-2022 10:35PM
ಶಿರ್ವ : ತಮ್ಮ ಹೆಸರು ಶಾಶ್ವತವಾಗಿ ನಿಲ್ಲಬೇಕಾದರೆ ಇಂತಹ ಸಂಸ್ಥೆಯ ಪ್ರತಿನಿಧಿ ಆಗಬೇಕು ಮತ್ತು ನಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕಿದ್ದರೆ ಅವರನ್ನು ಸಂಸ್ಥೆಗಳಿಗೆ ಸೇರಿಸಬೇಕು ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಯುವಕ ಸೇವಾದಳದ ಅಧ್ಯಕ್ಷರಾದ ರಾಜೇಶ್ ಆಚಾರ್ಯ ಹೇಳಿದರು.
ಅವರು ಶ್ರೀ ವಿಶ್ವಬ್ರಾಹ್ಮಣ ಯುವಸಂಗಮ (ರಿ.) ಮತ್ತು ಮಹಿಳಾ ಬಳಗ ಶಿರ್ವ ಇದರ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಶಿರ್ವ ಎಸ್. ಕೆ. ಜಿ. ಬ್ಯಾಂಕ್ ನ ಪ್ರಬಂಧಕರಾದ ಕಸ್ತೂರಿ ದೇವರಾಜ್ ಆಚಾರ್ಯರು ದಶಮಾನೋತ್ಸವದ ಮೊದಲ ಕಾರ್ಯಕ್ರಮ ಗೋವಿಗಾಗಿ ಮೇವು ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸೃಜನ್ ಆಚಾರ್ಯ ಇವರನ್ನು ಅಭಿನಂದಿಸಲಾಯಿತು. ಅಧ್ಯಕ್ಷ ಉಮೇಶ್ ಆಚಾರ್ಯ ಅತಿಥಿಗಳಿಗೆ ಸ್ಮರಣಿಕೆ ನೀಡಿ ಎಲ್ಲರೂ ಒಮ್ಮನಸ್ಸಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಶಮಾನೋತ್ಸವ ಯಶಸ್ವಿಗೊಳಿಸಬೇಕೆಂದು ಎಲ್ಲರ ಸಹಕಾರ ಕೋರಿದರು.
ಕಾರ್ಯದರ್ಶಿ ಪ್ರೀತಿ ಉಮೇಶ್ ವರದಿ ವಾಚಿಸಿದರು. ಶೋಭಾ ಶಂಕರ್ ಪರಿಚಯಿಸಿದರು. ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ಲೆಕ್ಕಪತ್ರ ಮಂಡಿಸಿ ದಶಮಾನೋತ್ಸವ ಕಾರ್ಯಕ್ರಮದ ಸ್ಥೂಲ ಪರಿಚಯ ನೀಡಿದರು.
ಗೌರವಾಧ್ಯಕ್ಷ ಸುರೇಶ ಆಚಾರ್ಯ, ಮಹಿಳಾ ಬಳಗ ದ ಅಧ್ಯಕ್ಷೆ ಸುಮತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶರ್ಮಿಳಾ ಆಚಾರ್ಯ ಪ್ರಾರ್ಥಿಸಿದರು. ಮಹಿಳಾ ಬಳಗದ ಉಪಾಧ್ಯಕ್ಷೆ ಮಂಜುಳಾ ಉಮೇಶ್ ಸ್ವಾಗತಿಸಿದರು. ಮಾಧವ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಪ್ರೀತಮ್ ಆಚಾರ್ಯ ವಂದಿಸಿದರು.