ಕಟಪಾಡಿ : ಇಲ್ಲಿಯ ಬಿಜೆಪಿ ಪಕ್ಷದ ಮಹಾಶಕ್ತಿಕೇಂದ್ರ ಸಭೆ ಇಂದು ಕಟಪಾಡಿಯಲ್ಲಿ ನಡೆಯಿತು. ಪ್ರಧಾನಿ ಮೋದಿ ಜನ್ಮದಿನದಿಂದ ಗಾಂಧಿಜಯಂತಿ ತನಕ ಪಕ್ಷ ಕೊಟ್ಟ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆದು ಮಾಹಿತಿ ವಿನಿಮಯ ಮಾಡಿಕೊಂಡು ಮುಂಬರುವಂತಹ ಯಾವುದೇ ಚುನಾವಣೆಗಳಿಗೆ ಪಕ್ಷ ಸಂಪೂರ್ಣ ಸನ್ನಧ್ಧವಾಗುವಲ್ಲಿ ಮಾಡಬೇಕಾದ ಚಟುವಟಿಕಗಳ ಬಗ್ಗೆ ಚರ್ಚಿಸಲಾಯಿತು.
ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ ಕುರ್ಕಾಲು ವಹಿಸಿದ್ದರು. ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್,
ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಸಹಕಾರ ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ಮುರಳೀಧರ ಪೈ, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ ವಿವಿಧ ಶಕ್ತಿಕೇಂದ್ರ ಪ್ರಮುಖರು, ಪದಾಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.