ಬಿಜೆಪಿಯಿಂದ ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ ಆಯೋಜನೆ
Posted On:
16-09-2022 04:48PM
ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಅಭಿಯಾನ ಆಯೋಜಿಸಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ ರಾಘವೇಂದ್ರ ಕಿಣಿಯವರು ಕಾಪು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ರವರ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ವೈಶಿಷ್ಟ ಪೂರ್ಣ ಸೇವಾ ಕಾರ್ಯ ಹಮ್ಮಿಕೊಂಡಿದ್ದು ಅದರಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಸೆಪ್ಟೆಂಬರ್ ೨೫ರಂದು ಭಾರತೀಯ ಜನಸಂಘದ ಸಂಸ್ಥಾಪಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನ ಹಾಗೂ ಅಕ್ಟೋಬರ್ ೨ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಆಚರಿಸಲಾಗುವುದು.
ಆರೋಗ್ಯ ತಪಾಸಣಾ ಶಿಬಿರ, ಲಸಿಕಾ ಅಭಿಯಾನ, ರಕ್ತದಾನ ಶಿಬಿರ, ಕಮಲೋತ್ಸವ, ಅಶ್ವಥ ಮರ ನೆಡುವ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಅಂಗನವಾಡಿ ಸೇವಾ ದಿವಸ್, ಕ್ಷಯರೋಗ ನಿರ್ಮೂಲನ ದಿವಸ ಸಹಿತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಸಹ ವಕ್ತಾರ ಶಿವಕುಮಾರ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಿ ಜಿ ಸುವರ್ಣ, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ಮಂಡಲ ಕಾರ್ಯದರ್ಶಿ ಗೋಪಾಲ್ ಕೃಷ್ಣರಾವ್, ಸಮರ್ಥ್ ಶೆಟ್ಟಿ, ಪ್ರತಾಪ್ ಶೆಟ್ಟಿ, ಅನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.